ಫರಂಗಿಪೇಟೆ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ.
ಬಂಟ್ವಾಳ: ಫರಂಗಿಪೇಟೆ ಹಿಂದೂ ಧಾರ್ಮಿಕ ಸೇವಾ ಸಮಿತಿ ಇದರ ಆಶ್ರಯದಲ್ಲಿ 44ನೇ ವರ್ಷದ ಫರಂಗಿಪೇಟೆ ಗಣೇಶೋತ್ಸವ ಸೆ. 14ರಿಂದ 16ರ ವರೆಗೆ ವಿಜೃಂಭಣೆಯಿಂದ ನಡೆಯಲಿದ್ದು ಇದರ ಪೂರ್ವಭಾವಿಯಾಗಿ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಜು 19ರಂದು ಆದಿತ್ಯವಾರ ಸೇವಾಂಜಲಿ ಸಭಾಗೃಹದಲ್ಲಿ ನಡೆಯಿತು.
ಫರಂಗಿಪೇಟೆ ಗಣೇಶೋತ್ಸವ ಸಮಿತಿಯ ಅಧ್ಯಕ್ಷೆ ಕೆ ಕವಿತಾ ದೇವದಾಸ ಅರ್ಕುಳ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಕಾರ್ಯಕ್ರಮದ ಯಶಸ್ವಿಗಾಗಿ ಸರ್ವರ ಸಹಕಾರ ಕೋರಿದರು.
ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೃಷ್ಣ ಕುಮಾರ್ ಪೂಂಜ ಮಾತನಾಡಿ, ಸೇವಂಜಲಿಯಲ್ಲಿ ಸೇವಾ ಚಟುವಟಿಕೆಗಳು ನಿರಂತರವಾಗಿ ನಡೆಯಲು ಗಣೇಶೋತ್ಸವವೇ ಪ್ರೇರಣೆ, ಧಾರ್ಮಿಕ ಕಾರ್ಯಕ್ರಮಗಳ ಮೂಲಕ ಸಮಾಜದ ಎಲ್ಲಾ ವರ್ಗದ ಜನರು ಸಂಘಟಿರಾಗೋಣ ಎಂದರು.
ವೇದಿಕೆಯಲ್ಲಿ ಫರಂಗಿಪೇಟೆ ಹಿಂದೂ ಧಾರ್ಮಿಕ ಸೇವಾ ಸಮಿತಿಯ ಉಪಾಧ್ಯಕ್ಷ
ಎ. ದಾಮೋದರ ಶೆಣೈ,ಗಣೇಶೋತ್ಸವ ಸಮಿತಿಯ ಕಾರ್ಯದರ್ಶಿ ಶೇಖರ ಪೂಜಾರಿ ಕಲ್ಲತಡಮೆ, ಕೋಶಾಧಿಕಾರಿ ರಾಜೇಶ್ ಬಿ ಅಂಚನ್ ಸುಜೀರು, ಪ್ರಕಾಶ ಕಿದೆಬೆಟ್ಟು ಸಹಿತ ಪದಾಧಿಕಾರಿಗಳು ಉಪಸ್ಥಿತರಿದ್ದರು.


Discover more from BHAKTHI SANJEEVINI
Subscribe to get the latest posts sent to your email.



Leave a Reply