🔥 Follow our WhatsApp Channel! ×
WhatsApp
Loading Now

ಕುಂದಾಪುರ: ಢಕ್ಕೆ ಮಂಡಲೋತ್ಸವ ಫೆ.10ರಂದು

ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಕಲ್ಲಾರಬೈಲು ಕಂಡ್ಲೂರಿನ ಶ್ರೀ ಬಾಲಚಿಕ್ಕಮ್ಮ ದೇವಿ ದೇವಸ್ಥಾನದಲ್ಲಿ ಫೆಬ್ರವರಿ 10, 2026 (ಮಂಗಳವಾರ) ರಂದು ಢಕ್ಕೆ ಮಂಡಲೋತ್ಸವ ಭಕ್ತಿಭಾವ ಹಾಗೂ ವೈಭವದಿಂದ ನಡೆಯಲಿದೆ.

ಮಂಡಲೋತ್ಸವದ ಪೂರ್ವಭಾವಿಯಾಗಿ ಫೆಬ್ರವರಿ 6ರಂದು ಬೆಳಿಗ್ಗೆ 9ರಿಂದ 12ರವರೆಗೆ ಧಾಮಿಕ ಕಾರ್ಯಕ್ರಮಗಳು ನಡೆಯಲಿದ್ದು, ಫೆಬ್ರವರಿ 8ರಂದು ಬೆಳಿಗ್ಗೆ 9ರಿಂದ 12ರವರೆಗೆ ಹಾಗೂ ಸಂಜೆ ವಿಶೇಷ ಪೂಜೆಗಳು ನಡೆಯಲಿವೆ. ಫೆಬ್ರವರಿ 10ರಂದು ಬೆಳಿಗ್ಗೆ 11ರಿಂದ ಮಧ್ಯಾಹ್ನ 2ರವರೆಗೆ ಹಾಗೂ ಸಂಜೆ 7ರಿಂದ 8ರವರೆಗೆ ವಿಶೇಷ ಪೂಜೆ–ಅರ್ಚನೆಗಳು ನಡೆಯಲಿದ್ದು, ರಾತ್ರಿ 12 ಗಂಟೆಗೆ ಢಕ್ಕೆ ಮಂಡಲೋತ್ಸವ ಕಾರ್ಯಕ್ರಮ ನೆರವೇರಲಿದೆ.

ಕ್ಷೇತ್ರದ ಆಡಳಿತ ಮಂಡಳಿ ಹಾಗೂ ಸೇವಾ ಪ್ರತಿನಿಧಿಗಳು ಎಲ್ಲ ಭಕ್ತಾದಿಗಳು ಕುಟುಂಬ ಸಮೇತರಾಗಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಶ್ರೀ ಬಾಲಚಿಕ್ಕಮ್ಮ ದೇವಿಯ ಕೃಪೆಗೆ ಪಾತ್ರರಾಗಬೇಕಾಗಿ ವಿನಂತಿಸಿದ್ದಾರೆ.


Discover more from BHAKTHI SANJEEVINI

Subscribe to get the latest posts sent to your email.

Leave a Reply

You May Have Missed

Discover more from BHAKTHI SANJEEVINI

Subscribe now to keep reading and get access to the full archive.

Continue reading