🔥 Follow our WhatsApp Channel! ×
WhatsApp
Loading Now

ಕುಂದಾಪುರ: ಶ್ರೀ ಭದ್ರಮಹಾಕಾಳಿ ದೈವಸ್ಥಾನ, ಕಟ್ ಬೇಲ್ತೂರಿನಲ್ಲಿ ಫೆ. 12ರಿಂದ 20ರವರೆಗೆ ವಾರ್ಷಿಕ ಜಾತ್ರೆ

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಶ್ರೀ ಭದ್ರಮಹಾಕಾಳಿ ದೈವಸ್ಥಾನ, ಕಟ್ ಬೇಲ್ತೂರಿನಲ್ಲಿ ಫೆಬ್ರವರಿ 12ರಿಂದ 20, 2026ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಭಕ್ತಿಭಾವದಿಂದ ನಡೆಯಲಿವೆ. ಈ ಅವಧಿಯಲ್ಲಿ ಕೋಲ ಸೇವೆ, ಕೊಡನೀರು, ವಾರ್ಷಿಕ ಹಬ್ಬ, ತುಲಾಭಾರ ಹಾಗೂ ವಿಶೇಷ ಪೂಜೆಗಳು ನೆರವೇರಲಿವೆ.

ಫೆಬ್ರವರಿ 19ರಂದು ಸಂಜೆ ಯಕ್ಷಗಾನ ಬಯಲಾಟ ನಡೆಯಲಿದ್ದು, ಫೆಬ್ರವರಿ 20ರಂದು ಬೆಳಿಗ್ಗೆ ಮಂಗಳಾರತಿ, ಮಹಾಪೂಜೆ ಹಾಗೂ ಮಧ್ಯಾಹ್ನ ಮಹಾ ಅನ್ನಸಂತರ್ಪಣೆ ನಡೆಯಲಿದೆ.

ಕ್ಷೇತ್ರದ ಆಡಳಿತ ಮಂಡಳಿ ಹಾಗೂ ಸೇವಾ ಸಮಿತಿ ಎಲ್ಲಾ ಭಕ್ತಾದಿಗಳು ಕುಟುಂಬ ಸಮೇತರಾಗಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀ ಭದ್ರಮಹಾಕಾಳಿ ದೇವಿಯ ಕೃಪೆಗೆ ಪಾತ್ರರಾಗುವಂತೆ ವಿನಂತಿಸಿದ್ದಾರೆ.


Discover more from BHAKTHI SANJEEVINI

Subscribe to get the latest posts sent to your email.

Leave a Reply

You May Have Missed

Discover more from BHAKTHI SANJEEVINI

Subscribe now to keep reading and get access to the full archive.

Continue reading