ಫೆ. 7ರಂದು ಅತ್ತಾವರದಲ್ಲಿ ಬೃಹತ್ ಹಿಂದೂ ಸಂಗಮ
ಮಂಗಳೂರು: ಹಿಂದೂ ಸಂಗಮ ಆಯೋಜನಾ ಸಮಿತಿ ಕದ್ರಿ ಹಾಗೂ ಅರ್ಜುನ ವಸತಿ ಅತ್ತಾವರ ಇವರ ವತಿಯಿಂದ ಫೆಬ್ರವರಿ 7ರಂದು ಅತ್ತಾವರದ ಶ್ರೀ ಚಕ್ರಪಾಣಿ ಗೋಪಿನಾಥ ಕ್ಷೇತ್ರದಲ್ಲಿ ಬೃಹತ್ ಹಿಂದೂ ಸಂಗಮ ಆಯೋಜಿಸಲಾಗಿದೆ. ಸಭಾ ಕಾರ್ಯಕ್ರಮಕ್ಕೆ ಮುನ್ನ ಸಂಜೆ 5 ಗಂಟೆಗೆ ಅತ್ತಾವರಕಟ್ಟೆಯಿಂದ ವೈಭವದ ಶೋಭಾ ಯಾತ್ರೆ ನಡೆಯಲಿದೆ. ಸಂಜೆ 5.30ಕ್ಕೆ ಶ್ರೀ ಚಕ್ರಪಾಣಿ ಗೋಪಿನಾಥ ಕ್ಷೇತ್ರದಲ್ಲಿ ಸಭಾ ಕಾರ್ಯಕ್ರಮ ಆರಂಭಗೊಳ್ಳಲಿದೆ. ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನತೆ ಪಾಲ್ಗೊಳ್ಳುವಂತೆ ಆಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Discover more from BHAKTHI SANJEEVINI
Subscribe to get the latest posts sent to your email.



Leave a Reply