ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಗುರುಪೂರ್ಣಿಮೆ ಮಹೋತ್ಸವ.
ಮಂಗಳೂರು: ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಕೊಡಿಯಾಲ್ ಬೈಲ್‌ನಲ್ಲಿರುವ ಕುದ್ರೋಳಿ ಶ್ರೀ ಭಗವತಿ ಕ್ಷೇತ್ರದ ಕೂಟಕ್ಕಳ ಆಡಿಟೋರಿಯಂನಲ್ಲಿ ಗುರುಪೂರ್ಣಿಮೆ ಮಹೋತ್ಸವ ನಡೆಯಿತು.
ಈ ಸಂದರ್ಭದಲ್ಲಿ ‘ಹಿಂದೂ ರಾಷ್ಟ್ರದ ಸ್ಥಾಪನೆಗಾಗಿ ಸಂಘರ್ಷ ಮತ್ತು ಸಾಧನೆಯ ದಿಶೆ’ ಎಂಬ ವಿಷಯದ ಕುರಿತು ಮಾತನಾಡಿದ ಡಾ| ಪ್ರಣವ್ ಮಲ್ಯ ಅವರು, ಇಂದಿನ ಜಾಗತಿಕ ಅಸ್ಥಿರತೆ, ಆರ್ಥಿಕ ಸಂಕಷ್ಟ ಹಾಗೂ ಮಾನಸಿಕ ಒತ್ತಡದ ವಾತಾವರಣದಲ್ಲಿ ಶಾಂತಿ ಮತ್ತು ಧೈರ್ಯವನ್ನು ಪಡೆಯಲು ಗುರುಗಳ ಮಾರ್ಗದರ್ಶನದಲ್ಲಿ ಆಧ್ಯಾತ್ಮಿಕ ಸಾಧನೆ ಹಾಗೂ ಧರ್ಮಾಚರಣೆ ಮಾಡುವುದು ಅತ್ಯಗತ್ಯವಾಗಿದೆ ಎಂದರು.

ವಕೀಲ ರಾಜೇಶ್ ಶೆಟ್ಟಿ ಅವರು ಮಾತನಾಡಿದರು. ಈ ಮಹೋತ್ಸವದ ಆರಂಭದಲ್ಲಿ ಶ್ರೀ ವ್ಯಾಸಪೂಜೆ ಮತ್ತು ಪ.ಪೂ. ಭಕ್ತರಾಜ ಮಹಾರಾಜರ ಪ್ರತಿಮಾ ಪೂಜೆ, ಸಚ್ಚಿದಾನಂದ ಪರಬ್ರಹ್ಮ ಡಾ| ಆಠವಲೆ ಅವರ ಸಂದೇಶ ವಾಚನ, ರಾಮರಾಜ್ಯದ ಸ್ಥಾಪನೆಗಾಗಿ ಸಂಕಲ್ಪ ಮತ್ತು ನಾಮಜಪ ಮೊದಲಾದವು ಜರಗಿದವು. ಹಿಂದೂ ಮಹಾಸಭಾದ ಅಧ್ಯಕ್ಷ ಲೋಹಿತ್ ಸುವರ್ಣ, ಹಿಂದೂ ಸೇವಾ ಸಮಿತಿ ಜಪ್ಪಿನಮೊಗರು ಇದರ ಅಧ್ಯಕ್ಷ ಯೋಗೀಶ್ ರೈ, ಶಾಸಕ ವೇದವ್ಯಾಸ ಕಾಮತ್, ಜಪ್ಪಿನಮೊಗರಿನ ಮಾಜಿ ಕಾರ್ಪೊರೇಟರ್ ಸುರೇಂದ್ರ, ಬಜಾಲ್ ಕಾವು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಆಡಳಿತ ಮುಖ್ಯಸ್ಥ ರಾಮಚಂದ್ರ ಆಳ್ವ ವಕೀಲ ಸುಜಯ್ ಶೆಟ್ಟಿ ಹಾಗೂ ಸುರತ್ಕಲ್ ಸಾರ್ವಜನಿಕ ಶಾರದಾ ಮಹೋತ್ಸವದ ಮಾಜಿ ಅಧ್ಯಕ್ಷರಾದ ಕೃಷ್ಣ ಶೆಟ್ಟಿ ಮೊದಲಾದವರು ಪಾಲ್ಗೊಂಡಿದ್ದರು.

Discover more from BHAKTHI SANJEEVINI
Subscribe to get the latest posts sent to your email.



Leave a Reply