ಕುದ್ರೋಳಿ ಕ್ಷೇತ್ರದಲ್ಲಿ ಹಿಂದೂ ಜನಜಾಗೃತಿ ಸಮಿತಿಯಿಂದ ಸತ್ಸಂಗ ಕಾರ್ಯಕ್ರಮ
ಮಂಗಳೂರು: ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಮಂಗಳೂರಿನ ಕುದ್ರೋಳಿ ಶ್ರೀ ಭಗವತಿ ಕ್ಷೇತ್ರದಲ್ಲಿ ವಿಶೇಷ ಸತ್ಸಂಗ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ಕಾರ್ಯಕ್ರಮದಲ್ಲಿ ಸನಾತನ ಸಂಸ್ಥೆಯ ಧರ್ಮಪ್ರಚಾರಕ ರಮಾನಂದ ಗೌಡ ಅವರು ಮಾತನಾಡಿ, ಮನುಷ್ಯನು ಲೌಕಿಕ ಸುಖವನ್ನೇ ಸತ್ಯವೆಂದು ನಂಬಿ ‘ನಾನು ಮತ್ತು ನನ್ನದು’ ಎಂಬ ಭ್ರಮೆಯಲ್ಲಿ ಬದುಕುತ್ತಿರುವುದನ್ನು ಉಲ್ಲೇಖಿಸಿದರು. ಈ ಭ್ರಮೆಯಿಂದ ಹೊರಬಂದು ಧರ್ಮದ ನಿಜವಾದ ಜ್ಞಾನವನ್ನು ಪಡೆದು, ಸಾಧನೆಯ ಮೂಲಕ ಆಧ್ಯಾತ್ಮಿಕ ಬಲವನ್ನು ಹೆಚ್ಚಿಸಿಕೊಳ್ಳುವುದು ಅತ್ಯಂತ ಅಗತ್ಯವೆಂದು ಹೇಳಿದರು.

ಇದೇ ಸಂದರ್ಭದಲ್ಲಿ ಅವರು ಇತಿಹಾಸದ ಉದಾಹರಣೆಗಳನ್ನು ನೀಡುತ್ತಾ, ಛತ್ರಪತಿ ಶಿವಾಜಿ ಮಹಾರಾಜರು ಹಾಗೂ ಹಕ್ಕ-ಬುಕ್ಕರು ಗುರುಗಳ ಮಾರ್ಗದರ್ಶನದಲ್ಲಿ ಹಿಂದವೀ ಸ್ವರಾಜ್ಯ ಮತ್ತು ವಿಜಯನಗರ ಸಾಮ್ರಾಜ್ಯವನ್ನು ಸ್ಥಾಪಿಸಿ ಆದರ್ಶ ರಾಜ್ಯಾಡಳಿತ ನೀಡಿದುದನ್ನು ಸ್ಮರಿಸಿದರು. ಇಂತಹ ಧಾರ್ಮಿಕ ಮತ್ತು ಸಾಂಸ್ಕೃತಿಕ ಮೌಲ್ಯಗಳನ್ನು ಉಳಿಸಿ ಬೆಳೆಸುವ ಕಾರ್ಯದಲ್ಲಿ ಇಂದಿನ ಪೀಳಿಗೆಯೂ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಪ್ರಮುಖರಾದ ಡಾ. ಪ್ರಣವ್ ಮಲ್ಯ ಉಪಸ್ಥಿತರಿದ್ದರು.
Discover more from BHAKTHI SANJEEVINI
Subscribe to get the latest posts sent to your email.



Leave a Reply