🔥 Follow our WhatsApp Channel! ×
WhatsApp
Loading Now

ಮಹತೋಭಾರ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಆ.12ರಂದು ‘ಆಟಿ ಅಮಾವಾಸ್ಯೆ’ ತೀರ್ಥಸ್ನಾನ.

ಬಂಟ್ವಾಳ ತಾಲೂಕು ಪುರಾಣ ಪ್ರಸಿದ್ಧ ಮಹತೋ ಭಾರ ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಆ.12ರಂದು ಆಟಿ ಅಮವಾಸ್ಯೆ ಪ್ರಯುಕ್ತ ತೀರ್ಥಸ್ನಾನ, ವಿಶೇಷ ಉತ್ಸವ ಜರಗಲಿದೆ.

ಬೃಹತ್ ಬಂಡೆಗಳಿಂದ ಆವೃತವಾದ ಗಿರಿಧಾಮದಲ್ಲಿರುವ ಆಕರ್ಷಣೀಯ, ಅತ್ಯಂತ ಪ್ರಾಚೀನ, ರಮ್ಯ ಈ ದೇವಸ್ಥಾನದ ದಕ್ಷಿಣ ಭಾಗದ ತಳದಲ್ಲಿರುವ ಗದಾತೀರ್ಥವೆಂಬ ಸರೋವರದಲ್ಲಿ ಅನಾದಿ ಕಾಲದಿಂದಲೂ ಆರೋಗ್ಯ ಸಮೃದ್ಧಿಯ ಸಂದೇಶ ಸಾರುವ ಆಟಿ ಅಮಾವಾಸ್ಯೆಯಂದು ಭಕ್ತಾಧಿಗಳು ಹಾಗೂ ವಿಶೇಷವಾಗಿ ನವದಂಪತಿಗಳು ಇಲ್ಲಿ ಪುಣ್ಯ ಸ್ನಾನಮಾಡಿ ಪಾರ್ವತಿ ಪರಮೇಶ್ವರರಿಗೆ ಪೂಜೆ ಸಲ್ಲಿಸಿ ಇಷ್ಟಾರ್ಥ ಈಡೇರಿಸಿಕೊಳ್ಳುವ ಸಂಪ್ರದಾಯವಿದೆ.

ದೇವಸ್ಥಾನದಲ್ಲಿ ಅಮವಾಸ್ಯೆಯಂದು ಬೆಳಗ್ಗೆ 3 ಗಂಟೆಯಿಂದ ಆಟಿಯ ಅಮೃತ ಎಂದು ಬಣ್ಣಿಸಲಾದ ಹಾಳೆ ಮರದ ಕೆತ್ತೆಯ ಕಷಾಯ ವಿತರಣೆ ನಡೆಯಲಿದೆ. ಆ ದಿನ ವಿಶೇಷ ತೀರ್ಥಸ್ನಾನ ಹಾಗೂ ದೇವರಿಗೆ ವಿಶೇಷ ಪೂಜೆ ನಡೆಯಲಿದೆ.

ಶ್ರೀ ಕ್ಷೇತ್ರದಲ್ಲಿ ನಡೆಯಲಿರುವ ವಿಶೇಷ ಧಾರ್ಮಿಕ ಕಾರ್ಯಕ್ರಮದ ಅಂಗವಾಗಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ತೀರ್ಥಸ್ನಾನ ಹಾಗೂ ದೇವರ ದರ್ಶನ ಪಡೆಯುವ ನಿರೀಕ್ಷೆಯಿದೆ. ಆಟಿ ಅಮಾವಾಸ್ಯೆಯ ಹಿನ್ನೆಲೆಯಲ್ಲಿ ಶ್ರೀ ಕ್ಷೇತ್ರಕ್ಕೆ ಆಗಮಿಸುವ ಭಕ್ತರ ಅನುಕೂಲಕ್ಕಾಗಿ ಅಗತ್ಯ ವ್ಯವಸ್ಥೆಗಳನ್ನು ಕೈಗೊಳ್ಳಲಾಗುತ್ತಿದೆ. ಎಂದು ದೇವಸ್ಥಾನದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.


Discover more from BHAKTHI SANJEEVINI

Subscribe to get the latest posts sent to your email.

Leave a Reply

You May Have Missed

error: Content is protected !!

Discover more from BHAKTHI SANJEEVINI

Subscribe now to keep reading and get access to the full archive.

Continue reading