🔥 Follow our WhatsApp Channel! ×
WhatsApp
Loading Now

ಮಂಗಳಾದೇವಿ ದೇವಸ್ಥಾನದಲ್ಲಿ ನಲಿಕೆದ ಕುಣಿತ ಮಾರ್ಚ್ 8ರಂದು ಭಜನಾ ಸ್ಪರ್ಧೆ

ಮಂಗಳೂರು: ಶ್ರೀ ಮಂಗಳಾದೇವಿ ಕರಸೇವಕರು, ಬೋಳಾರ ಹಾಗೂ ಶ್ರೀ ಮಂಗಳಾದೇವಿ ದೇವಸ್ಥಾನದ ಆಡಳಿತ ಮಂಡಳಿಯ ಸಹಯೋಗದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಮಟ್ಟದ ನಲಿಕೆದ ಕುಣಿತ ಭಜನಾ ಸ್ಪರ್ಧೆಯನ್ನು ಆಯೋಜಿಸಲಾಗಿದೆ.

ಈ ಸ್ಪರ್ಧೆ ಮಾರ್ಚ್ 8, 2026ರಂದು ಸಂಜೆ 3 ಗಂಟೆಗೆ ಮಂಗಳೂರಿನ ಮಂಗಳಾದೇವಿ ದೇವಸ್ಥಾನದ ಮುಂಭಾಗದಲ್ಲಿ ನಡೆಯಲಿದೆ. ಜಿಲ್ಲಾಮಟ್ಟದ ಈ ಭಜನಾ ಸ್ಪರ್ಧೆಯಲ್ಲಿ ವಿವಿಧ ಭಜನಾ ತಂಡಗಳು ಭಾಗವಹಿಸಲಿದ್ದು, ಭಕ್ತಿಭಾವ ಹಾಗೂ ಸಾಂಸ್ಕೃತಿಕ ಉತ್ಸಾಹಕ್ಕೆ ವೇದಿಕೆ ಕಲ್ಪಿಸುವುದು ಕಾರ್ಯಕ್ರಮದ ಉದ್ದೇಶವಾಗಿದೆ.

ಭಕ್ತಾದಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಆಯೋಜಕರು ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.


Discover more from BHAKTHI SANJEEVINI

Subscribe to get the latest posts sent to your email.

Leave a Reply

You May Have Missed

Discover more from BHAKTHI SANJEEVINI

Subscribe now to keep reading and get access to the full archive.

Continue reading