🔥 Follow our WhatsApp Channel! ×
WhatsApp
Loading Now

ಶ್ರೀ ಮಂಗಳಾದೇವಿ ಅಮ್ಮನವರ ವರ್ಷಾವಧಿ ಜಾತ್ರಾ ಮಹೋತ್ಸವ–2026: ಆಮಂತ್ರಣ ಪತ್ರಿಕೆ ಬಿಡುಗಡೆ

ಮಂಗಳೂರು: ಬೇಡಿದ್ದನ್ನು ನೀಡುವ, ಕೇಳಿದ್ದನ್ನು ಕೊಡುವ ಭಕ್ತ ಪರಾಧೀನಳಾದ ಶ್ರೀ ಮಂಗಳಾದೇವಿ ಅಮ್ಮನವರ ವರ್ಷಾವಧಿ ಜಾತ್ರಾ ಮಹೋತ್ಸವದ ಸಂಭ್ರಮ ಆರಂಭಗೊಂಡಿದೆ. 2026ನೇ ಸಾಲಿನ ಜಾತ್ರಾ ಮಹೋತ್ಸವದ ಅಂಗವಾಗಿ ಆಮಂತ್ರಣ ಪತ್ರಿಕೆಯನ್ನು ತಾಯಿಯ ಸನ್ನಿಧಾನದಲ್ಲಿ ವಿಧಿವಿಧಾನಗಳೊಂದಿಗೆ ಬಿಡುಗಡೆ ಮಾಡಲಾಯಿತು.

ಶ್ರೀ ಕ್ಷೇತ್ರದ ಅರ್ಚಕ ವರ್ಗ, ಆಡಳಿತ ಮೊಕ್ತೇಸರರು, ಧರ್ಮದರ್ಶಿ ಆಡಳಿತ ಮಂಡಳಿ ಹಾಗೂ ಭಕ್ತಾದಿಗಳ ಸಮ್ಮುಖದಲ್ಲಿ, ಶ್ರೀ ವಿಶ್ವಾವಸು ನಾಮ ಸಂವತ್ಸರದಲ್ಲಿ ನಡೆಯುವ “ಶ್ರೀ ಮಂಗಳಾದೇವಿ ವರ್ಷಾವಧಿ ಜಾತ್ರಾ ಮಹೋತ್ಸವ–2026”ರ ಆಮಂತ್ರಣ ಪತ್ರಿಕೆಯನ್ನು ಕಳೆದ ಬುಧವಾರ ಪ್ರಾರ್ಥನಾ ಪೂರ್ವಕವಾಗಿ ಬಿಡುಗಡೆಗೊಳಿಸಲಾಯಿತು.

ದೇವಳದ ಮುಖಮಂಟಪದ ಪ್ರವೇಶ ದ್ವಾರದಲ್ಲಿ ಆಮಂತ್ರಣ ಪತ್ರಿಕೆಯನ್ನು ಇರಿಸಿ, ಭಗವದ್ಭಂದುಗಳ ಸಮಾಕ್ಷಮದಲ್ಲಿ ತಾಯಿಯ ಸನ್ನಿಧಾನದಲ್ಲಿ ಅಧಿಕೃತವಾಗಿ ಬಿಡುಗಡೆ ಮಾಡಲಾಯಿತು. ಈ ಸಂದರ್ಭದಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು, ಜಾತ್ರಾ ಮಹೋತ್ಸವವನ್ನು ಭಕ್ತಿಭಾವದಿಂದ ಆಚರಿಸುವಂತೆ ಆಹ್ವಾನಿಸಲಾಯಿತು.

ಜಾತ್ರಾ ಮಹೋತ್ಸವದ ಅಂಗವಾಗಿ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕ್ಷೇತ್ರದ ಆಡಳಿತ ಮಂಡಳಿ ಮನವಿ ಮಾಡಿದೆ.


Discover more from BHAKTHI SANJEEVINI

Subscribe to get the latest posts sent to your email.

Leave a Reply

You May Have Missed

Discover more from BHAKTHI SANJEEVINI

Subscribe now to keep reading and get access to the full archive.

Continue reading