ಶ್ರೀ ಮಂಗಳಾದೇವಿ ದೇವಸ್ಥಾನದಲ್ಲಿ ಜಾತ್ರಾ ಮಹೋತ್ಸವ: ಸಹಸ್ರಾರು ಭಕ್ತರ ದರ್ಶನ
ಶ್ರೀ ಮಂಗಳಾದೇವಿ ದೇವಸ್ಥಾನದಲ್ಲಿ ಮಾರ್ಚ್ 8ರಿಂದ ಆರಂಭವಾದ ವರ್ಷಾವಧಿ ಜಾತ್ರಾ ಮಹೋತ್ಸವವು ವಿಜೃಂಭಣೆಯಿಂದ ನಡೆಯುತ್ತಿದ್ದು, ಕ್ಷೇತ್ರಕ್ಕೆ ಸಹಸ್ರಾರು ಭಕ್ತರು ಆಗಮಿಸಿ ದೇವಿಯ ದರ್ಶನ ಪಡೆದುಕೊಳ್ಳುತ್ತಿದ್ದಾರೆ.
ಜಾತ್ರೆಯ ಅಂಗವಾಗಿ ಸೋಮವಾರದ ಚತುರ್ಥಿ ದಿನ 108 ಕಾಯಿ ಗಣಯಾಗವು ಭಕ್ತಿಭಾವದಿಂದ ನೆರವೇರಿತು. ಬೆಳಗ್ಗಿನಿಂದಲೇ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಪ್ರಾತಃಕಾಲ ಪೂಜೆ, ನವಕಲಶಾಭಿಷೇಕ, ಮಧ್ಯಾಹ್ನ ಪೂಜೆ ಹಾಗೂ ನಂತರ ಅನ್ನಸಂತರ್ಪಣೆ ನಡೆಯಿತು. ಸಂಜೆ 6.30ಕ್ಕೆ ಬಯನ ಬಲಿ, ಮಹಾಪೂಜೆ ಮತ್ತು ಭೂತಬಲಿ ನೆರವೇರಿತು.



ಇಂದು (ಮಾ.10) ದೇವಸ್ಥಾನದಲ್ಲಿ ಪ್ರಾತಃಕಾಲ ಪೂಜೆ, ಗಣಹೋಮ, ನವಕಲಶಾಭಿಷೇಕ ಮತ್ತು ಶ್ರೀ ಮಂಗಳಾದೇವಿ ಅಮ್ಮನಿಗೆ ಶತರುದ್ರಾಭಿಷೇಕ ನಡೆಯಿತು. ಜಾತ್ರೆಯ ಅಂಗವಾಗಿ ಪ್ರತಿದಿನ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿದ್ದು, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ.
Discover more from BHAKTHI SANJEEVINI
Subscribe to get the latest posts sent to your email.



Leave a Reply