ಉಚ್ಚಿಲ ಮಹಾಲಕ್ಷ್ಮಿ ಕ್ಷೇತ್ರದಲ್ಲಿ ನಾಳೆ (ಆ.10 ) ತುಪ್ಪದ ಅಪ್ಪ ಸೇವೆ.
ಪಡುಬಿದ್ರಿ: ಶ್ರೀ ಮಹಾಲಕ್ಷ್ಮೀ ದೇವಸ್ಥಾನ, ಶ್ರೀ ಕ್ಷೇತ್ರ ಉಚ್ಚಿಲದ ವತಿಯಿಂದ ಆಷಾಢ ಮಾಸದಲ್ಲಿ ಹಿಂದಿನಿಂದಲೂ ನಡೆದುಕೊಂಡು ಬರುತ್ತಿರುವ ಶ್ರೀ ಮಹಾಲಕ್ಷ್ಮೀ ಅಮ್ಮ ನವರಿಗೆ ಪ್ರಿಯವಾದ ವಿಶೇಷ ತುಪ್ಪದ ಅಪ್ಪ ಸೇವೆ ಆ.10 ರಂದು ಸಂಜೆ 3.30ರಿಂದ ಶ್ರೀ ಕ್ಷೇತ್ರದಲ್ಲಿ ನೆರವೇರಿಸಲಾಗುವುದು. ಈ ವಿಶೇಷ ಸೇವೆಯು ಶ್ರೀ ಕ್ಷೇತ್ರದ ಪರಂಪರೆಯ ಧಾರ್ಮಿಕ ಆಚರಣೆಯ ಭಾಗವಾಗಿದ್ದು, ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಶ್ರೀ ಕ್ಷೇತ್ರದ ವತಿಯಿಂದ ವಿನಂತಿಸಲಾಗಿದೆ. ವಿಶೇಷ ತುಪ್ಪದ ಅಪ್ಪ ಸೇವೆಯನ್ನು ನೀಡಲು ಇಚ್ಛಿಸುವ ಭಕ್ತಾದಿಗಳು ಶ್ರೀ ಕ್ಷೇತ್ರದ ಸೇವಾ ಕೌಂಟರ್‌ನಲ್ಲಿ ಸೇವಾ ರಶೀದಿ ಪಡೆದುಕೊಳ್ಳಬಹುದು ಎಂದು ಪ್ರಕಟಣೆ ತಿಳಿಸಿದೆ.
Discover more from BHAKTHI SANJEEVINI
Subscribe to get the latest posts sent to your email.



Leave a Reply